ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಪವಿತ್ರಾ ಲೋಕೇಶ್ ಸೈಬರ್ ಠಾಣೆಯ ಮೆಟ್ಟಿಲೇರಿದ್ದು, ತಮ್ಮ ವಿರುದ್ಧದ ಗಾಸಿಪ್ ಬಗ್ಗೆ ದೂರು ದಾಖಲಿಸಿದ್ದಾರೆ.
ನಟಿ ಪವಿತ್ರಾ ಲೋಕೇಶ್ ದಾಂಪತ್ಯ ಜೀವನದ ಬಗ್ಗೆ ಹಲವು ಗಾಸಿಪ್ ಗಳು ಹರಿದಾಡುತ್ತಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ಪವಿತ್ರಾ ಲೋಕೇಶ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಪವಿತ್ರಾ ಲೋಕೇಶ್ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.
ಮೈಸೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿರುವ ಪವಿತ್ರಾ ಲೋಕೇಶ್ ತಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.