alex Certify BIG NEWS: ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; 24 ಗಂಟೆಯಲ್ಲಿ 54,069 ಜನರಲ್ಲಿ ಕೊರೊನಾ ಪಾಸಿಟಿವ್….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; 24 ಗಂಟೆಯಲ್ಲಿ 54,069 ಜನರಲ್ಲಿ ಕೊರೊನಾ ಪಾಸಿಟಿವ್….!

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಇಳಿಮುಖವಾಗುತ್ತಿದೆ. ಆದರೆ ಕಳೆದ ಎರಡು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ 54,069 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,00,82,778 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 1,321 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,91,981ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 6,27,057ಕೋವಿಡ್ ಸಕ್ರಿಯ ಪ್ರಕರಣಗಳಿವೆ. 2,90,63,740 ಜನರು ಕೋವಿಡ್ ನಿಂದ ಗುಣಮುಖರಾಗಿದ್ದು, ಕಳೆದ 24 ಗಂಟೆಯಲ್ಲಿ 68,885 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ 18,59,469 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಈವರೆಗೆ 39,78,32,667 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದೆ. ದೇಶದಲ್ಲಿ ಈವರೆಗೆ 30,16,26,028 ಜನರಿಗೆ ಲಸಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...