ನವದೆಹಲಿ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋನಿಯಾ ಗಾಂಧಿ ಅನಾರೋಗ್ಯದಿಂದ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಸೋನಿಯಾ ಅವರ ಆರೊಗ್ಯದ ಮೇಲೆ ನಿಗಾ ವಹಿಸಿದ್ದಾರೆ ಎಂದು ತಿಳಿದುಬಂದಿದೆ.
ಉಪ್ಪು ನೀರಿನ ಉಪಯೋಗಗಳಿವು
ಈ ಕುರಿತು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಕೋವಿಡ್ ಸಂಬಂಧಿತ ಆರೋಗ್ಯ ಸಮಸ್ಯೆಯಿಂದ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ತಂಡ ಅವರ ಆರೋಗ್ಯದ ಬಗ್ಗೆ ನಿಗಾವಹಿಸಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದೆ.