ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿದ್ದಾರೆ.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಶಿಮ್ಲಾಗೆ ತೆರಳಿದ್ದ ಸೋನಿಯಾ ಗಾಂಧಿಯವರು ನಿನ್ನೆ ದೆಹಲಿಗೆ ವಾಪಸ್ ಆಗಿರುವ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ, ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಈ ವೇಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆಯೂ ಸಮಾಲೋಚಿಸುವ ಸಾಧ್ಯತೆ ಇದೆ.