ನವದೆಹಲಿ: ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪುತ್ರ ಸಂಸದ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡಿರುವ ಇಡಿ, ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸೂಚನೆ ನೀಡಿದೆ.
ಜೂನ್ 2ರಂದು ಅಂದರೆ ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಇಬ್ಬರು ನಾಯಕರಿಗೆ ಸಮನ್ಸ್ ನಲ್ಲಿ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.