ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಹೆಚ್ಚುತ್ತಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ನಾಲ್ಕನೇ ಅಲೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮಕ್ಕಳಿಗೂ ಲಸಿಕೆ ನೀಡಲಾಗುತ್ತಿದೆ. ಸೋಮವಾರದಿಂದ 6-12 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ತಯಾರಿ ನಡೆಸಲಾಗಿದೆ ಎಂದರು.
BIG NEWS: ಸಚಿವ ಸಂಪುಟ ವಿಸ್ತರಣೆ ವಿಚಾರ; ಅಮಿತ್ ಶಾ ರಾಜ್ಯಕ್ಕೆ ಬಂದಾಗಲೇ ತೀರ್ಮಾನ ಎಂದ ಸಿಎಂ
ಜನರು ಲಸಿಕೆ ಹಾಗೂ ಮಾಸ್ಕ್ ಕಡ್ಡಾಯವಾಗಿ ಹಾಕಬೇಕು. ಸಧ್ಯಕ್ಕೆ ಆತಂಕವಿಲ್ಲ. ಆದರೆ ಮುಂಜಾಗೃತೆ ವಹಿಸುವ ಅಗತ್ಯವಿದೆ. ಎರಡು ಮೂರು ದಿನಗಳಿಂದ ಬೂಸ್ಟರ್ ಡೋಸ್ ಪಡೆಯುತ್ತಿರುವವರ ಸಂಖ್ಯೆ ಕೂಡ ಹೆಚ್ಚಿದೆ ಎಂದು ತಿಳಿಸಿದರು.
ಇನ್ನು ರಾಜ್ಯದಲ್ಲಿ ಒಮಿಕ್ರಾನ್ ಹೊಸ ತಳಿ ಪತ್ತೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ಈಗಾಗಲೇ ಲ್ಯಾಬ್ ಗೆ ಸೋಂಕಿನ ಸ್ಯಾಂಪಲ್ ಕಳುಹಿಸಲಾಗಿದೆ. ಇಂದು ಸಂಜೆ ಅಥವಾ ನಾಳೆ ವರದಿ ಬರಲಿದೆ. ಬಳಿಕ ಸ್ಪಷ್ಟನೆ ಸಿಗಲಿದೆ ಎಂದರು.