ನವದೆಹಲಿ: ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಹಿನ್ನೆಲೆಯಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಯ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ವಿಚಾರಣೆಗೆ ಹಾಜರಾಗುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಇಡಿ ಸಮನ್ಸ್ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿದ್ದೇವೆ. ನನಗೆ ಹಾಗೂ ನನ್ನ ತಮ್ಮನಿಗೆ ಸಮನ್ಸ್ ನೀಡಿದ್ದರು. ಕಾಲಾವಕಾಶ ಕೇಳಿದರೂ ಕೊಟ್ಟಿಲ್ಲ. ಹಾಗಾಗಿ ಇಂದೇ ವಿಚಾರಣೆಗೆ ಹಾಜರಾಗಿದ್ದೇವೆ ಎಂದರು.
ಅವರು ಯಾವ ವಿಚಾರ ಕೇಳುತ್ತಾರೆ ಗೊತ್ತಿಲ್ಲ. ನಾವು ಕಾನೂನನ್ನು ಗೌರವಿಸಿ ವಿಚಾರಣೆಗೆ ಹಾಜರಾಗಿದ್ದೇವೆ. ಸೋಲಾರ್ ಹಗರಣದ ತನಿಖೆಯನ್ನೂ ಮಾಡಲಿ. ನಾನು ತಪ್ಪು ಮಾಡಿದ್ದರೆ ನನ್ನಗೆ ಗಲ್ಲಿಗೇರಿಸಲಿ. ಸಿಬಿಐ ಸೇರಿ ಯಾವ ಸಂಸ್ಥೆಯಿಂದಾದರೂ ತನಿಖೆ ನಡೆಸಲಿ ಯಾವುದೇ ಆತಂಕವೂ ಇಲ್ಲ ಎಂದು ಹೇಳಿದರು.