ಬೆಂಗಳೂರು: ರಾಜ್ಯದಲ್ಲಿ ವಿವಿಧೆಡೆ ಸ್ಥಳೀಯವಾಗಿ ಪ್ರಸಿದ್ಧವಾಗಿರುವ ಕ್ರೀಡೆಗಳನ್ನು ಗುರುತಿಸಿ ಅವುಗಳಲ್ಲಿ ತೊಡಗಿಸಿಕೊಂಡಿರುವ ಕ್ರೀಡಾಪಟುಗಳನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ ಸಶಕ್ತಗೊಳಿಸುವ ನಿಟ್ಟಿನಲ್ಲಿ “ಒಂದು ಜಿಲ್ಲೆ ಒಂದು ಕ್ರೀಡೆ” ಯೋಜನೆ ಜಾರಿಗೊಳಿಸಲು ಚಿಂತನೆ ನಡೆಸಲಾದೆ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಒಂದೊಂದು ಪ್ರದೇಶದಲ್ಲಿ ಒಂದೊಂದು ಕ್ರೀಡೆಗಳು ಹೆಸರುವಾಸಿ. ವಿಜಯನಗರದಲ್ಲಿ ಕುಸ್ತಿ, ವಿಜಯಪುರದಲ್ಲಿ ಸೈಕ್ಲಿಂಗ್ ನಂತೆ ಎಲ್ಲ ಜಿಲ್ಲೆಗಳಲ್ಲಿಯೂ ಒಂದೊಂದು ಕ್ರೀಡೆಗಳು ಹೆಸರುವಾಸಿಯಾಗಿವೆ. ಆ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿರುವ ಪ್ರತಿಭಾವಂತ ಕ್ರೀಡಾಪಟುಗಳನ್ನು ಹೋಬಳಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಿ ಸನ್ನದ್ಧಗೊಳಿಸಲಾಗುವುದು ಎಂದರು.
ಇದೇ ವೇಳೆ ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ 1588 ಕೋಟಿ ರೂ. ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ರೂ.236 ಕೋಟಿ ರೂಗಳನ್ನು ಬಜೆಟ್ ನಲ್ಲಿ ಹಂಚಿಕೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗಾಗಿ 5ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಒದಗಿಸಿದ್ದು, ಸದರಿ ಅನುದಾನದ ಸದ್ಭಳಕೆ ಮಾಡಿಕೊಂಡು ಸಮಗ್ರ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಕ್ರಿಯಾಯೋಜನೆಗಳನ್ನು ರೂಪಿಸಲಾಗುವುದು ಎಂದರು.