ಮಂಡ್ಯ: ಪೂಜೆಗಾಗಿ ಸಂಗಮಕ್ಕೆ ಬಂದಿದ್ದ ಯುವಕನೊಬ್ಬ, ನದಿ ನೀರಿನಲ್ಲಿ ಸ್ನಾನಕ್ಕೆಂದು ಇಳಿದು, ನೀರಿನ ರಭಸಕ್ಕೆ ಕಾವೇರಿ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಬೆಂಗಳೂರಿನ ಯಲಹಂಕ ನಿವಾಸಿ 26 ವರ್ಷದ ಅಶೋಕ್ ಮೃತ ಯುವಕ. ಕುಟುಂಬ ಹಾಗೂ ಸ್ನೇಹಿತರ ಜತೆಗೆ ಪೂಜೆಗಾಗಿ ಸಂಗಮಕ್ಕೆ ಆಗಮಿಸಿದ್ದರು. ಈ ವೇಳೆ ಸ್ನಾನ ಮಾಡಲು ನದಿಗೆ ಇಳಿದಿದ್ದಾಗ ಕಾಲು ಜಾರಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ.
ಭಾರಿ ಮಳೆಯಿಂದಾಗಿ ನದಿಯಲ್ಲಿ ನೀರಿನ ರಭಸ ಹೆಚ್ಚಿದ್ದರಿಂದ ಯುವಕನನ್ನು ರಕ್ಷಿಸಲು ಸಾಧ್ಯವಾಗಿಲ್ಲ. ಕುಟುಂಬದವರು ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ಸಿಬ್ಬಂದಿಗಳು, ಬೋಟ್, ಪಾತಾಳ ಗರಡಿ ಬಳಸಿ ಯುವಕನಿಗಾಗಿ ನದಿಯಲ್ಲಿ ಶೋಧ ನಡೆಸಲಾಗುತ್ತಿದೆ.