ಬೆಂಗಳೂರು: ಟ್ರಾಫಿಕ್ ಪೊಲೀಸರ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಡಿ ಕ್ಯಾಮರಾ ಧರಿಸುವಂತೆ ಸಂಚಾರಿ ಪೊಲೀಸರಿಗೆ ಸೂಚಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಸ್ಮಾರ್ಟ್ ಟ್ರಾಫಿಕ್ ನಿರ್ವಹಣೆ ಜಾರಿಗೆ ತರುವಂತೆ ಸೂಚಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಟ್ರಾಫಿಕ್ ಪೊಲೀಸರು ಬಾಡಿ ಕ್ಯಾಮರಾಗಳನ್ನು ಧರಿಸುವಂತೆ ಸರ್ಕಾರ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಹೇಳಿದೆ.
ಈ ವೇಳೆ ಒಟ್ಟು 2,680 ಬಾಡಿ ಕ್ಯಾಮರಾಗಳನ್ನು ಖರೀದಿಸಲಾಗುವುದು. ಈವರೆಗೆ 1097 ಬಾಡಿ ಕ್ಯಾಮರಾಗಳನ್ನು ಖರೀದಿಸಲಾಗಿದೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.