ಮೈಸೂರು: ಕೆ ಎಸ್ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಟ್ರೋ ರವಿಗೆ ಪೊಲೀಸರು ವಿಚಾರಣಾಧೀನ ಕೈದಿ ಸಂಖ್ಯೆ ನೀಡಿದ್ದಾರೆ.
ಸ್ಯಾಂಟ್ರೋ ರವಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮೈಸೂರಿನ ಕೇಂದ್ರ ಕಾರಾಗೃಹದಲ್ಲಿರುವ ಸ್ಯಾಂಟ್ರೋ ರವಿಗೆ ಸಿಬ್ಬಂದಿಗಳು ವಿಚಾರಣಾಧೀನ ಕೈದಿ ನಂಬರ್ ನೀಡಿದ್ದಾರೆ.
ಸ್ಯಾಂಟ್ರೋ ರವಿ ಈಗ ವೀಚಾರಣಾಧೀನ ಕೈದಿ ನಂಬರ್ 18894. ನಿನ್ನೆ ಇಡೀ ದಿನ ಜೈಲಿನಲ್ಲಿ ಕ್ವಾರಂಟೈನ್ ನಲ್ಲಿ ಕಾಲ ಕಳೆದಿದ್ದ ಎಂದು ತಿಳಿದುಬಂದಿದೆ.