ಮೈಸೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.
ಬಂಧನ ಭೀತಿಯಲ್ಲಿರುವ ಸ್ಯಾಂಟ್ರೋ ರವಿ ವಕೀಲರ ಮೂಲಕ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದು, ಅರ್ಜಿ ವಿಚಾರಣೆಯನ್ನು ಜನವರಿ 17ಕ್ಕೆ ಮುಂದೂಡಿ ಮೈಸೂರಿನ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ನಿರೀಕ್ಷಣಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದೆ.
ಇನ್ನೊಂದೆಡೆ ತಲೆಮರೆಸಿಕೊಂಡಿರುವ ಸ್ಯಾಂಟ್ರೋ ರವಿಗಾಗಿ ಮೈಸೂರು ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದು, ಮಂಡ್ಯ, ರಾಮನಗರ, ಕರ್ನಾಟಕ-ಕೇರಳ ಗಡಿ ಭಾಗದಲ್ಲಿಯೂ ಶೋಧಕಾರ್ಯ ಚುರುಕುಗೊಳಿಸಿದ್ದಾರೆ.