alex Certify BIG NEWS: ಸ್ವಪಕ್ಷದ ಮುಖಂಡರ ಫ್ಲೆಕ್ಸ್ ವಿರುದ್ಧವೇ ಸಂಸದ ಪ್ರತಾಪ್ ಸಿಂಹ ಕಿಡಿ; ಕ್ರಮ ಕೈಗೊಳ್ಳುವಂತೆ ಪಾಲಿಕೆಗೆ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ವಪಕ್ಷದ ಮುಖಂಡರ ಫ್ಲೆಕ್ಸ್ ವಿರುದ್ಧವೇ ಸಂಸದ ಪ್ರತಾಪ್ ಸಿಂಹ ಕಿಡಿ; ಕ್ರಮ ಕೈಗೊಳ್ಳುವಂತೆ ಪಾಲಿಕೆಗೆ ಆಗ್ರಹ

ಮೈಸೂರು: ಸ್ವ-ಪಕ್ಷೀಯ ನಾಯಕರ ಫ್ಲೆಕ್ಸ್, ಬ್ಯಾನರ್ ಗಳ ವಿರುದ್ಧ ಸಂಸದ ಪ್ರತಾಪ್ ಸಿಂಹ ತಿರುಗಿಬಿದ್ದಿದ್ದಾರೆ. ನಗರದ ತುಂಬೆಲ್ಲ ಫ್ಲೆಕ್ಸ್ ಅಳವಡಿಸಲಾಗಿದ್ದು, ಪಾಲಿಕೆ ಆಯುಕ್ತರು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಸಚಿವ ಮುರುಗೇಶ್ ನಿರಾಣಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ಮೈಸೂರಿನಾದ್ಯಂತ ಕಟೌಟ್, ಬ್ಯಾನರ್, ಫ್ಲೆಕ್ಸ್ ಅಳವಡಿಸಿದ್ದು, ಇದರ ಜತೆ ಜೆಡಿಎಸ್ ನ ಜನತಾ ಜಲಧಾರೆ ಅಭಿಯಾನದ ಫ್ಲೆಕ್ಸ್ ಕೂಡ ಎಲ್ಲೆಡೆ ವ್ಯಾಪಿಸಿದೆ.

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಇಲ್ಲಿದೆ ಒಂದು ಬಹುಮುಖ್ಯ ಮಾಹಿತಿ

ಈ ಬಗ್ಗೆ ಟ್ವಿಟರ್ ನಲ್ಲಿ ಕಿಡಿಕಾರಿರುವ ಪ್ರತಾಪ್ ಸಿಂಹ, ಇದು ಪಾಲಿಕೆ ಅಧಿಕಾರಿಗಳ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿ. ಫ್ಲೆಕ್ಸ್ ಅಳವಡಿಸುವ ರಾಜಕೀಯ ಪಕ್ಷಗಳಿಗೆ ನೋಟೀಸ್ ಜಾರಿ ಮಾಡುವಂತೆ ಮೈಸೂರು ನಗರ ಪೊಲೀಸ್ ಆಯುಕ್ತರು ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...