
ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಕಾರಣವೇನು ಎಂಬ ಬಗ್ಗೆ ಬಿಜೆಪಿ ನಾಯಕರು ನವದೆಹಲಿಯಲ್ಲಿ ಪರಾಮರ್ಶನೆ ಸಭೆ ನಡೆಸಿದ್ದು, ಸಭೆಯಲ್ಲಿ ಸ್ವಪಕ್ಷದ ನಾಯಕರ ವಿರುದ್ಧವೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, ಕೆಲವರ ರಾಜಿ ರಾಜಕಾರಣದಿಂದಾಗಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ನಮ್ಮಲ್ಲಿ ಕೆಲವರು ರಾಜಿ ಮಾಡಿಕೊಂಡು ತಪ್ಪು ಮಾಡಿದ್ದಾರೆ ಎಂದು ಹೇಳಿದ್ದಾರೆ.
ಹೊಂದಾಣಿಕೆ ರಾಜಕಾರಣದಿಂದಾಗಿಯೇ ಬಿಜೆಪಿ ಸೋತಿದೆ. ಇಂತಹ ಹೊಂದಾಣಿಕೆ ರಾಜಕಾರಣ ಮಾಡಿಕೊಳ್ಳದಿದ್ದರೆ ಪಕ್ಷ ಅಧಿಕಾರ ಕಳೆದುಕೊಳ್ಳುವ ಸ್ಥಿತಿ ಬರುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.