ಬೆಂಗಳೂರು: ರೈಲ್ವೆ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಏಕಾಏಕಿ ತಮ್ಮ ಸೇವೆಗೆ ರಾಜೀನಾಮೆ ಘೋಷಿಸಿ ನಿನ್ನೆಯಷ್ಟೇ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ಭಾಸ್ಕರ್ ರಾವ್ ರಾಜ್ಯಸಭೆಗೆ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಹಿರಿಯ ಪೊಲೀಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದ ಭಾಸ್ಕರ್ ರಾವ್, ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಸದ್ಯಕ್ಕೆ ರಾಜಕೀಯ ಸೇರ್ಪಡೆ ಬಗ್ಗೆ ನಿರ್ಧರಿಸಿಲ್ಲ ಯಾವುದೇ ರಾಜಕೀಯ ಪಕ್ಷಗಳೂ ತಮ್ಮನ್ನು ಸಂಪರ್ಕಿಸಿಲ್ಲ ಎಂದು ಹೇಳಿಕೆ ನೀಡಿದ್ದ ಭಾಸ್ಕರ್ ರಾವ್, ಇದೀಗ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಕೊರೊನಾ ಲಸಿಕೆ ಸ್ವೀಕರಿಸದವರಿಗೆ ಸಾರ್ವಜನಿಕ ಸೇವೆ ʼಬಂದ್ʼ ಮಾಡಿದೆ ಈ ಪಾಲಿಕೆ..!
ಇತ್ತೀಚೆಗೆ ನಿಧನರಾಗಿರುವ ಆಸ್ಕರ್ ಫರ್ನಾಂಡಿಸ್ ಅವರಿಂದ ತೆರವಾದ ಸ್ಥಾನದ ಮೇಲೆ ಭಾಸ್ಕರ್ ರಾವ್ ಕಣ್ಣಿಟ್ಟಿದ್ದು, ಸದ್ಯದಲ್ಲೇ ರಜ್ಯಸಭಾ ಸ್ಥಾನಕ್ಕಾಗಿ ಉಪ ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.