
ಬೆಂಗಳೂರು: ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಇಳಿದಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಬಾಲಕರು ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಇಳಿದಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬಾಲಕರ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.