ಬೆಂಗಳೂರು: ನಾದಬ್ರಹ್ಮ ಹಂಸಲೇಖಾ ಆಕ್ಷೇಪಾರ್ಹ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ಹಂಸಲೇಖಾ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಈ ನಡುವೆ ನಟ ಚೇತನ್ ಹಂಸಲೇಖಾ ಜೊತೆ ಠಾಣೆಗೆ ನಾನೂ ಬರುತ್ತೇನೆ ಎಂದು ಪೋಸ್ಟ್ ಹಾಕಿದ್ದು, ಇದಕ್ಕೆ ಭಜರಂಗದಳ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ.
ಹಂಸಲೇಖಾ ಇಂದು ಬಸವನನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದ್ದು, ನಟ ಚೇತನ್ ತಾನೂ ಕೂಡ ಹಂಸಲೇಖಾ ಜೊತೆ ಪೊಲೀಸ್ ಠಾಣೆಗೆ ಬರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ನಟ ಚೇತನ್ ಪೋಸ್ಟ್ ಹಾಕುತ್ತಿದ್ದಂತೆ ಆಕ್ರೋಶ ವ್ಯಕ್ತಪಡಿಸಿರುವ ಭಜರಂಗದಳ ಕಾರ್ಯಕರ್ತರು ಬಸವನಗುಡಿ ಠಾಣೆ ಎದುರು ಜಮಾಯಿಸಿದ್ದಾರೆ. ಒಂದು ವೇಳೆ ಚೇತನ್ ಬಂದರೆ ಕಪ್ಪು ಬಾವುಟ ಪ್ರದರ್ಶನ ಮಾಡಿ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ನಡುವೆ ಬಸವನಗುಡಿ ಠಾಣೆ ಎದುರು ಹಂಸಲೇಖಾ ಬೆಂಬಲಿಗರು ಕೂಡ ಆಗಮಿಸಿದ್ದು, ಹಂಸಲೇಖಾ ಪರ ಘೋಷಣೆ ಕೂಗುತ್ತಿದ್ದಾರೆ. ಒಟ್ಟಾರೆ ಬಸವನಗುಡಿ ಪೊಲೀಸ್ ಠಾಣೆ ಎದುರು ಹೈಡ್ರಾಮಾ ನಡೆದಿದೆ.
Chetan Ahimsa
