ಬೆಂಗಳೂರು: 7ನೇ ವೇತನ ಆಯೋಗದ ಮಧ್ಯಂತರ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ರಾಜ್ಯಾದ್ಯಂತ ಮುಷ್ಕರ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ರೇಸ್ ಕೋರ್ಸ್ ಬಳಿಯ ಸರ್ಕಾರಿ ನಿವಾಸದಲ್ಲಿ ಸಿಎಂ ಬೊಮ್ಮಾಯಿ, ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಲಿದ್ದಾರಾ ಕಾದು ನೋಡಬೇಕಿದೆ.
ವೇತನ ಹೆಚ್ಚಳ, ಹಳೆ ಪಿಂಚಣಿ ವ್ಯವಸ್ಥೆ ಜಾರಿ ಸೇರಿದಂತೆ 7ನೇ ವೇತನ ಆಯೋಗದ ಮಧ್ಯಂತರ ವರದಿ ಜಾರಿಗೆ ಒತ್ತಾಯಿಸಿ ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿದ್ದಾರೆ.