ಗಣೇಶ ಚತುರ್ಥಿ, ದುರ್ಗಾ ಪೂಜೆ ಸೇರಿದಂತೆ ಪ್ರಮುಖ ಹಬ್ಬಗಳ ಸಂದರ್ಭದಲ್ಲಿ ರಸ್ತೆ ಮೇಲೆ ಪೆಂಡಾಲ್ ಹಾಕಿ ಸ್ವಾಗತ ಕಮಾನುಗಳನ್ನು ನಿರ್ಮಿಸುವುದು ಸಾಮಾನ್ಯ ಸಂಗತಿ. ಆದರೆ ಈ ಕುರಿತಂತೆ ರಾಷ್ಟ್ರೀಯ ಹಸಿರು ನ್ಯಾಯ ಪೀಠ ಮಹತ್ವದ ಆದೇಶ ಹೊರಡಿಸಿದೆ.
ರಸ್ತೆಗಳಲ್ಲಿ ಪೆಂಡಾಲ್ ಗಳು ಮತ್ತು ಸ್ವಾಗತ ಕಮಾನುಗಳನ್ನು ನಿರ್ಮಿಸಲು ಅವಕಾಶ ನೀಡದಂತೆ ಜಿಲ್ಲಾಡಳಿಗಳಿಗೆ ಆದೇಶ ನೀಡಿದ್ದು, ಅನುಮತಿ ಪಡೆಯದೆ ಇವುಗಳನ್ನು ನಿರ್ಮಿಸಿದ್ದರೆ ಕೂಡಲೇ ತೆರವುಗೊಳಿಸಬೇಕು ಮತ್ತು ನಿರ್ಮಿಸಿದವರಿಗೆ ದಂಡ ವಿಧಿಸಬೇಕು ಎಂದು ತಿಳಿಸಲಾಗಿದೆ.
ಛತ್ತೀಸ್ಗಡದ ನಾಗರಿಕ ಸಂಘರ್ಷ ಸಮಿತಿ, ಪೆಂಡಾಲ್ ಗಳನ್ನು ರಸ್ತೆಗಳಲ್ಲಿ ನಿರ್ಮಿಸಿದ ವೇಳೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಪೀಠದ ಮುಂದೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಈ ಮಹತ್ವದ ಆದೇಶ ಹೊರಡಿಸಲಾಗಿದೆ.
ಅಲ್ಲದೆ ಶಬ್ದ ಮಾಲಿನ್ಯ ತಡೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಹಸಿರು ನ್ಯಾಯ ಪೀಠ ಸೂಚಿಸಿದ್ದು, ವಾಹನ ಸಂಚಾರಕ್ಕೂ ತೊಂದರೆಯಾಗದಂತೆ ಜಿಲ್ಲಾಡಳಿತಗಳು ನೋಡಿಕೊಳ್ಳಬೇಕು ಎಂದು ಹೇಳಿದೆ.