ಬೆಂಗಳೂರು: ಗೌರಿ-ಗಣೇಶ ಹಬ್ಬದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದ್ದು, ರಾಜ್ಯಕ್ಕೆ ಮೂರನೇ ಅಲೆ ಭೀತಿ ಎದುರಾಗಿದೆ.
ರಾಜ್ಯದಲ್ಲಿ ನಿನ್ನೆ 1,116 ಜನರಲ್ಲಿ ಸೋಂಕು ಹೊಸದಾಗಿ ಪತ್ತೆಯಾಗಿದೆ. ಸೆಪ್ಟೆಂಬರ್ 10 ರ ಬಳಿಕ ಬೆಂಗಳೂರಿನಲ್ಲಿ ಸೋಂಕಿತರ ಪ್ರಮಾಣದಲ್ಲಿ ದುಪ್ಪಟ್ಟು ಏರಿಕೆಯಾಗಿದೆ. ಸೆ.10 ರಂದು 559 ಜನರಲ್ಲಿ ಸೋಂಕು ದೃಢಪಟ್ಟಿತ್ತು. ಆದರೀಗ ಸೆ.15ರಂದು 1,116 ಪ್ರಕರಣಗಳು ದಾಖಲಾಗಿದ್ದು, ಆತಂಕವನ್ನುಂಟು ಮಾಡಿದೆ.
ʼನಮ್ಮ ಮೆಟ್ರೋʼ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್
ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದ್ದು, ಸರ್ಕಾರ ಕಟ್ಟುನಿಟ್ಟಿನ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಇಲ್ಲವಾದಲ್ಲಿ ಗಂಡಾಂತರ ಕಟ್ಟಿಟ್ಟಬುತ್ತಿ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.