ಬೆಂಗಳೂರು: ಹಳೆ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಬಜೆಟ್ ನಲ್ಲಿ ಘೋಷಣೆ ಮಾಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಹಾಗೂ ವಿವಿಧ ನೌಕರರ ಸಂಘಟನೆಗಳ ಪದಾಧಿಕಾರಿಗಳ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಮರು ಜಾರಿಗೆ ಮನವಿ ಮಾಡಲಾಗಿದೆ.
ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಮರು ಜಾರಿ ಮಾಡಲು ಚುನಾವಣೆಯಲ್ಲಿ ಭರವಸೆ ನೀಡಲಾಗಿದ್ದು, ಅದರಂತೆ ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು ಎಂದು ಎನ್‌ಪಿಎಸ್ ನೌಕರರು ಮನವಿ ಮಾಡಿದ್ದಾರೆ.
ಇದಕ್ಕೆ ಸ್ಪಂದಿಸಿದ ಸಿಎಂ ಸಿದ್ಧರಾಮಯ್ಯ, ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಬಜೆಟ್ ನಲ್ಲಿ ಒಪಿಎಸ್ ಘೋಷಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಂಸದ ಉಗ್ರಪ್ಪ, ಎನ್.ಪಿ.ಎಸ್. ನೌಕರರ ಸಂಘದ ಅಧ್ಯಕ್ಷ ಶಾಂತರಾಮ್ ತೇಜ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಕೆಪಿಟಿಸಿಎಲ್, ಜಲಮಂಡಳಿ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಹಲವು ನೌಕರರ ಸಂಘಗಳ ಪ್ರತಿನಿಧಿಗಳು ಇದ್ದರು.