alex Certify BIG NEWS: ಹಳೆ ಮೈಸೂರು ಭಾಗವೇ BJP ಟಾರ್ಗೆಟ್; ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಲಿರುವ ಮಂಡ್ಯ; 5 ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಚಾಣಕ್ಯನ ತಂತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಳೆ ಮೈಸೂರು ಭಾಗವೇ BJP ಟಾರ್ಗೆಟ್; ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಲಿರುವ ಮಂಡ್ಯ; 5 ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಚಾಣಕ್ಯನ ತಂತ್ರ

ಮಂಡ್ಯ: ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಮತಬೇಟೆಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದ್ದು, ಪ್ರಮುಖವಾಗಿ ಹಳೇ ಮೈಸೂರು ಭಾಗವನ್ನೇ ಟಾರ್ಗೆಟ್ ಮಾಡಿದೆ.

ಈ ನಿಟ್ಟಿನಲ್ಲಿ ನಾಳೆ ಮಂಡ್ಯದಲ್ಲಿ ಬಿಜೆಪಿ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಬೃಹತ್ ಸಮಾವೇಶ ನಡೆಸಲಿದ್ದಾರೆ. ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಸಕ್ಕರೆ ನಾಡು ಮಂಡ್ಯ ಸಾಕ್ಷಿಯಾಗಲಿದೆ. ಹಳೇ ಮೈಸೂರು ಭಾಗದ ಮೆಲೆ ಹೆಚ್ಚಿನ ಗಮನ ಹರಿಸುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಈಗಾಗಲೇ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.

ಮಂಡ್ಯದ 7 ವಿಧಾನಸಭಾ ಕ್ಷೇತ್ರಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಅದರಲ್ಲಿ ಕನಿಷ್ಠ 5 ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಅಮಿತ್ ಶಾ ತಂತ್ರ ರೂಪಿಸಿದ್ದಾರೆ. ಈ ನಿಟ್ಟಿನಲ್ಲಿ 7 ವಿಧಾನಸಭಾ ಕ್ಷೇತ್ರಗಳಿಗೂ ಬಿಜೆಪಿಯ ಪ್ರಬಲ ನಾಯಕರನ್ನು ಅಖಾಡಕ್ಕೆ ಇಳಿಸಲು ಪ್ಲಾನ್ ಮಾಡಿದೆ. ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಅಮಿತ್ ಶಾ, ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ನಾಯಕರನ್ನು ಸಜ್ಜುಗೊಳಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...