ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ವಸೀಂ ಪಠಾಣ್ ನನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ 4ನೇ ಜೆ ಎಂ ಎಫ್ ಸಿ ಕೋರ್ಟ್ ಆದೇಶ ನೀಡಿದೆ.
ಪೊಲೀಸ್ ಕಸ್ಟಡಿಯಲ್ಲಿದ್ದ ವಸೀಂ ಪಠಾಣ್ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯ ಏ.30ರವರೆಗೆ ಆರೋಪಿ ವಸೀಂ ನನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ನೀಡಿದೆ.
ಹಳೇ ಹುಬ್ಬಳ್ಳಿ ಗಲಭೆಗೆ ವಸೀಂ ಪಠಾಣ್ ಪ್ರಮುಖ ಕಾರಣನಾಗಿದ್ದು, ಗಲಭೆ ಬಳಿಕ ನಾಪತ್ತೆಯಾಗಿದ್ದ ಆತನನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದರು.