ಕಲಬುರ್ಗಿ: ಕಲಬುರ್ಗಿ ನಗರದಲ್ಲಿ ಹಾಡಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಾಡಿಸಿದ್ದಾರೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯನ ಸಹೋದರ ಹಾಗೂ ಇನ್ನೋರ್ವ ನ ಮೇಲೆ ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗಿದ್ದಾರೆ.
ಕಲಬುರ್ಗಿಯ ಆಳಂದ ಚೆಕ್ ಪೋಸ್ಟ್ ಬಳಿ ಈ ಘಟನೆ ನಡೆದಿದೆ. ಬುಲೆರೋ ವಾಹನದಲ್ಲಿ ಬಂದ ದುಷ್ಕರ್ಮಿಗಳ ಗುಂಪು ಇಬ್ಬರ ಮೇಲೆ ಏಕಾಏಕಿ ಫೈರಿಂಗ್ ಮಾಡಿದೆ.
ಚನ್ನವೀರ ಪಾಟೀಲ್ ಹಾಗೂ ಅವರ ಜೊತೆಗಿದ್ದ ಯುವಕನ ಮೇಲೂ ಗುಂಡಿನ ದಾಳಿ ನಡೆಸಿದ್ದಾರೆ. ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿಪಿ ಅಡ್ಡೂರು ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಬ್ ಅರ್ಬನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.