ಮೈಸೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಹೇಳಿಕೆ ಇದೀಗ ರಾಜ್ಯ ಬಿಜೆಪಿಯಲ್ಲಿ ತಲ್ಲಣವುಂಟುಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಹಾಲಿ ಶಾಸಕರು, ಕುಟುಂಬ ರಾಜಕಾರಣಿಗಳಿಗೆ ಬಿಜೆಪಿ ಟಿಕೆಟ್ ನೀಡುವುದಿಲ್ಲವೇ ಎಂಬ ಅನುಮಾನ ಆರಂಭವಾಗಿದೆ.
ಬಿಜೆಪಿಯಲ್ಲಿ ಹಾಲಿ ಶಾಸಕರು, ಕುಟುಂಬಸ್ಥರು, ಪಾಲಿಕೆ ಸದಸ್ಯರನ್ನು ಹೊರಗಿಟ್ಟು ಮುಂದಿನ ಚುನಾವಣೆ ಎದುರಿಸುತ್ತೇವೆ. ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ ಎಂದು ಹೇಳಿದರು.
ಕನಸಿನ ಮನೆ ಖರೀದಿಗಾಗಿ 4 ವರ್ಷಗಳಲ್ಲಿ 61 ಲಕ್ಷ ರೂ. ಕೂಡಿಟ್ಟ ಯುವತಿ…! ಇದಕ್ಕಾಗಿ ಈಕೆ ಏನೆಲ್ಲಾ ಮಾಡಿದ್ದಾಳೆ ಗೊತ್ತಾ…?
ಉದಾಹರಣೆಗೆ ದೆಹಲಿ ಪಾಲಿಕೆ ಚುನಾವಣೆಯಲ್ಲಿ ಹಾಲಿ ಸದಸ್ಯರಿಗೆ ಟಿಕೆಟ್ ನೀಡಿಲ್ಲ. ಗುಜರಾತ್ ಪಾಲಿಕೆ ಚುನಾವಣೆಗಳಲ್ಲಿ ಎರಡು ಬಾರಿ ಗೆದ್ದಿರುವವರನ್ನು ನಿವೃತ್ತಿಗೊಳಿಸಲಾಗಿದೆ. ಹೊಸ ಕಾರ್ಯಕರ್ತರಿಗೆ ಅವಕಾಶ ನೀಡಿ ಅಧಿಕಾರ ಪಡೆದಿದ್ದೇವೆ. ಬಿಜೆಪಿಯಲ್ಲಿ ಮಾತ್ರ ಈ ಪ್ರಯೋಗ ನಡೆಯುತ್ತದೆ. ಹೊಸ ಮುಖಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಹಾಲಿ ಶಾಸಕರಿಗೆ, ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎಂದು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಬಿ.ಎಲ್.ಸಂತೋಷ್ ನೀಡಿರುವ ಈ ಹೇಳಿಕೆ ಕಮಲ ಪಡೆ ಹಲವು ನಾಯಕರಿಗೆ ಆತಂಕ ಹುಟ್ಟಿಸಿದೆ.