alex Certify BIG NEWS: ಹಾಸನದಲ್ಲಿ ತಾರಕಕ್ಕೇರಿದ JDS-BJP ಕಾರ್ಯಕರ್ತರ ಗಲಾಟೆ; ಬಿಜೆಪಿ ಕಾರ್ಯಕರ್ತನ ಕೈ ಮುರಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಸನದಲ್ಲಿ ತಾರಕಕ್ಕೇರಿದ JDS-BJP ಕಾರ್ಯಕರ್ತರ ಗಲಾಟೆ; ಬಿಜೆಪಿ ಕಾರ್ಯಕರ್ತನ ಕೈ ಮುರಿತ

ಹಾಸನ: ಚುನಾವಣೆ ಸಮೀಪಿಸುತ್ತಿದ್ದಂತೆ ಸಣ್ಣ ಸಣ್ಣ ವಿಚಾರವೂ ರಾಜಕೀಯ ನಾಯಕರ ಹಾಗೂ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವಿನ ಕಿತ್ತಾಟಕ್ಕೆ ಕಾರಣವಾಗುತ್ತದೆ. ಹಾಸನದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಆರಂಭವಾಗಿದ್ದು, ಘಟನೆಯಲ್ಲಿ ಓರ್ವ ಕಾರ್ಯಕರ್ತನ ಕೈ ಮುರಿದಿದೆ.

ಹೇಮಾವತಿ ಪೈಪ್ ಲೈನ್ ಕಾಮಗಾರಿ ವಿಚಾರವಾಗಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಆರಂಭವಾದ ವಾಗ್ವಾದ ವಿಕೋಪಕ್ಕೆ ತಿರುಗಿದ್ದು, ಪರಸ್ಪರ ಕೈ ಕೈ ಮಿಲಾಯಿಸಿಕೊಳ್ಳುವ ಹಂತ ತಲುಪಿದೆ. ಈ ವೇಳೆ ನಡೆದ ಘರ್ಷಣೆಯಲ್ಲಿ ಬಿಜೆಪಿ ಕಾರ್ಯಕರ್ತರಿಬ್ಬರ ಕೈ ಮುರಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜೆಪಿ ಕಾರ್ಯಕರ್ತ ರಾಂಪುರ ಸುರೇಶ್ ಎಂಬುವವರ ಬಲಗೈ ಮುರಿದಿದ್ದು, ಗಾಯಾಳು ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅರಸಿಕೆರೆ ತಾಲೂಕಿನ ಡಿಎಂ ಕುರ್ಕೆ ಗ್ರಾಮದಲ್ಲಿ ಈ ಗಲಾಟೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...