ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲನ್ನು ತೆರೆಯಲಾಗಿದ್ದು, ಜಿಲ್ಲಾಡಳಿತದ ಸಮ್ಮುಖದಲ್ಲಿ ಅರ್ಚಕರು ಹಾಸನಾಂಬೆಗೆ ವಿಶೇಷ ಪೂಜೆ ನೇರವೇಸಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಕಳೆದ ವರ್ಷ ಹಾಸನಾಂಬೆ ದರ್ಶನಕ್ಕೆ ಸಾರ್ವಜನಕರಿಗೆ ನಿರ್ಬಂಧ ಹೇರಲಾಗಿತ್ತು. ಈ ವರ್ಷ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಆದರೆ ದೇವಾಲಯದ ಬಾಗಿಲು ತೆರೆದ ಮೊದಲ ದಿನವಾದ ಇಂದು ಆಹ್ವಾನಿತ ಗಣ್ಯರು, ಶಾಸಕರು, ಸಂಸದರು, ನಗರಸಭೆ ಸದಸ್ಯರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಾಳೆಯಿಂದ ಎಲ್ಲಾ ಭಕ್ತರಿಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಪಬ್ ನಲ್ಲಿ ಮದ್ಯ ಆರ್ಡರ್ ಮಾಡಿ ಮುಖ ಸುಟ್ಟುಕೊಂಡ ಮಹಿಳೆ…! ಕೋರ್ಟ್ ಮೆಟ್ಟಿಲೇರಿದಾಕೆಗೆ ಕೊನೆಗೂ ಸಿಕ್ತು ಪರಿಹಾರ
ಇಂದಿನಿಂದ ನವೆಂಬರ್ 5ರವರೆಗೂ ಹಾಸನಾಂಬೆ ದೇವಾಲಯದ ಬಾಗಿಲು ತೆರೆದಿರಲಿದ್ದು, ಬೆಳಿಗ್ಗೆ 6ರಿಂದ ಮಧ್ಯಾಹ್ನ 1ಗಂಟೆಯವರೆಗೆ ಹಾಗೂ ಮಧ್ಯಾಹ್ನ 3ರಿಂದ ರಾತ್ರಿ 8 ಗಂಟೆವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ದೇವಾಲಯಕ್ಕೆ ಬರುವ ಭಕ್ತರು ಆಧಾರ್ ಕಾರ್ಡ್, ಕೋವಿಡ್ ಲಸಿಕೆ ಪಡೆದ ಬಗ್ಗೆ ಪ್ರಮಾಣಪತ್ರವನ್ನು ತೆಗೆದುಕೊಂಡು ಬರುವುದು ಕಡ್ಡಾಯವಾಗಿದೆ.
https://www.youtube.com/watch?v=SAuOY9m88Lc&feature=share