alex Certify BIG NEWS: ಹಾಸ್ಟೆಲ್ ಗಳಿಗೆ ಹೊಸ ಮಾರ್ಗಸೂಚಿ ಜಾರಿ; ಕರ್ಫ್ಯೂ ಬಗ್ಗೆ ವಾರದಲ್ಲಿ ನಿರ್ಧಾರ ಎಂದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಸ್ಟೆಲ್ ಗಳಿಗೆ ಹೊಸ ಮಾರ್ಗಸೂಚಿ ಜಾರಿ; ಕರ್ಫ್ಯೂ ಬಗ್ಗೆ ವಾರದಲ್ಲಿ ನಿರ್ಧಾರ ಎಂದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಹಂತ ಹಂತವಾಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಹಾಸ್ಟೆಲ್ ಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಾಸ್ಟೆಲ್ ಗಳಿಗೆ ಹೊಸ ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ಹಾಸ್ಟೆಲ್ ನಲ್ಲಿ ಮಕ್ಕಳು ಒಟ್ಟಿಗೆ ಊಟಕ್ಕೆ ಹೋಗುವಂತಿಲ್ಲ. ಅಂತರ ಪಾಲಿಸಿಕೊಂಡು ಹೋಗುವ ವ್ಯವಸ್ಥೆಗಳನ್ನು ಹಾಸ್ಟೆಲ್ ಸಿಬ್ಬಂದಿಗಳು ಕೈಗೊಳ್ಳಬೇಕು. ಹಾಸ್ಟೆಲ್ ಸಿಬ್ಬಂದಿಗಳು 2 ಡೋಸ್ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು.

ವೇಗವಾಗಿ ಕಾರು ಚಲಾಯಿಸಿ ಅಪಘಾತ ಮಾಡಿದ ಕಿರುತೆರೆ ನಟಿ

ರಾಜ್ಯದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಇನ್ನೂ ಒಂದು ವಾರದ ಬೆಳವಣಿಗೆ ಅವಲೋಕಿಸಿ ತೀರ್ಮಾನಿಸಲಾಗುವುದು. ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುವುದು. ಮೂವರಿಗೆ ಕೋವಿಡ್ ಪಾಸಿಟಿವ್ ಬಂದರೆ ಕ್ಲಸ್ಟರ್ ಮಾಡುತ್ತೇವೆ. ಸಧ್ಯಕ್ಕೆ ಯಾವುದೇ ಹೊಸ ನಿರ್ಬಂಧಗಳು ಇಲ್ಲ ಎಂದು ಹೇಳಿದರು.

ಇನ್ನು ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಹೊಸ ಮಾರ್ಗಸೂಚಿ ಬಗ್ಗೆ ಅಧಿಕಾರಿಗಳ ಜತೆ ಇನ್ನೊಂದು ಸಭೆ ನಡೆಸಿ ವಾರದ ಬಳಿಕ ನಿರ್ಧರಿಸಲಾಗುವುದು ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...