ಮಧ್ಯಪ್ರದೇಶವು ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಶಿಕ್ಷಣವನ್ನು ಹಿಂದಿ ಭಾಷೆಗೂ ವಿಸ್ತರಿಸಿದೆ. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹಿಂದಿ ಭಾಷೆಯಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕೋರ್ಸ್ಗಳನ್ನು ಒದಗಿಸುತ್ತಿರುವ ಮೊದಲ ರಾಜ್ಯ ಮಧ್ಯಪ್ರದೇಶವಾಗಲಿದೆ ಎಂದು ಘೋಷಣೆ ಮಾಡಿದ್ದಾರೆ.
ಈ ನಿರ್ಧಾರದಿಂದ ವಿದ್ಯಾರ್ಥಿಗಳು ಹಿಂದಿಯೇತರ ಭಾಷಿಕ ಹಿನ್ನೆಲೆಯಿಂದ ಬಂದವರು ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪರಿಣಿತಿ ಇಲ್ಲದಿದ್ದರೂ ಸಹ ಶಿಕ್ಷಣಕ್ಕೆ ಸಮಾನ ಅವಕಾಶ ಸಿಗುತ್ತದೆ ಎಂದು ಸಿಎಂ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.
ನಮ್ಮ ಪ್ರತಿಭಾವಂತ ವಿದ್ಯಾರ್ಥಿಗಳು ಇಂಗ್ಲಿಷ್ ಭಾಷೆಯಲ್ಲಿ ಪರಿಣಿತಿಯ ಕೊರತೆಯಿಂದಾಗಿ ಸಮಾನ ಅವಕಾಶವನ್ನು ಪಡೆಯಲು ವಿಫಲರಾಗಿದ್ದಾರೆ ಎಂದು ರೇವಾದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಚೌಹಾಣ್ ಹೇಳಿದರು.
ಇನ್ನು ಇದರ ಜೊತೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ನ್ನು ಕಲಿಸಲಾಗುವುದು ಎಂದು ಚೌಹಾಣ್ ಮಾಹಿತಿ ನೀಡಿದರು. ಇದು ದೇಶದಲ್ಲಿ ಮೊದಲ ಬಾರಿಗೆ ಶಾಲಾ ಮಟ್ಟದಲ್ಲಿ ಕೋರ್ಸ್ ನೀಡಲಾಗುತ್ತಿದೆ.