ಬಾಗಲಕೋಟೆ: ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾದಾಮಿ ಪೊಲೀಸ್ ಠಾಣೆ ಸಿಪಿಐ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಕರೆಪ್ಪ ಬನ್ನೆ ಸಸ್ಪೆಂಡ್ ಆಗಿರುವ ಸಿಪಿಐ. ಸೆ.6ರಂದು ಕೆರೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆಯಾಗಿತ್ತು. ಗಲಾಟೆ ಪ್ರಕರಣ ಸಂಬಂಧ ಪೊಲೀಸರು ಹಿಂದೂ ಕಾರ್ಯಕರ್ತರನ್ನು ಬಂಧಿಸಿ ಠಾಣೆಗೆ ಕರೆದೊಯ್ದು ಚಿತ್ರಹಿಂಸೆ ನೀಡಿದ್ದರು.
ಪೊಲೀಸರ ಕ್ರಮ ಖಂಡಿಸಿ ಜಗದೀಶ್ ಕಾರಂತ ನೇತೃತ್ವದಲ್ಲಿ ಹಿಂದೂ ಜಾಗರಣ ವೇದಿಕೆ ಸಿಪಿಐ ಕರೆಪ್ಪ ವಿರುದ್ಧ ಕೆರೂರು ಚಲೋ ಪ್ರತಿಭಟನೆ ನಡೆಸಿದ್ದರು.
ಸಿಪಿಐ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಇದೀಗ ಸಿಪಿಐ ಕರೆಪ್ಪ ಬನ್ನೆಯವರನ್ನು ಅಮಾನತುಗೊಳಿಸಿ ಬಾಗಲಕೋಟೆ ಎಸ್ ಪಿ ಜಯಪ್ರಕಾಶ್ ಆದೇಶ ಹೊರಡಿಸಿದ್ದಾರೆ.