ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ-NIA ಅಧಿಕಾರಿಗಳು ಶಿವಮೊಗ್ಗದಲ್ಲಿ 18 ಕಡೆ ದಾಳಿ ನಡೆಸಿದ್ದಾರೆ.
ಹರ್ಷ ಕೊಲೆ ಪ್ರಕರಣದ ಆರೋಪಿಗಳ ಮನೆಗಳ ಮೇಲೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದು, ಆರೋಪಿಗಳ ಸಂಬಂಧಿಕರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಹಲವು ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದ್ದಾರೆ.
4 ರಾಜ್ಯಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡ ಹಾಗೂ ಜಿಲ್ಲೆಯ ಅಧಿಕಾರಿಗಳು ಸೇರಿ ಒಟ್ಟು 90 ಅಧಿಕಾರಿಗಳು 18 ಕಡೆಗಳಲ್ಲಿ ಇಂದು ಮುಂಜಾನೆ 5 ಗಂಟೆಯಿಂದಲೇ ದಾಳಿ ನಡೆಸಿದ್ದಾರೆ.