ಬೆಂಗಳೂರು: ’ಕಾಳಿ’ ಡಾಕ್ಯೂಮೆಂಟರಿ ಬಿಡುಗಡೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸಿದ್ಧತೆ ನಡೆಸಿರುವ ನಿರ್ದೇಶಕಿ ಲೀನಾ ಮಣಿ ಮೇಕಳೈ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.
ಕಾಳಿ ಮಾತೆ ಸಿಗರೇಟ್ ಸೇದುವ ರೀತಿಯಲ್ಲಿ ಬಿಂಬಿಸಲಾದ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ’ಕಾಳಿ’ ಎಂಬ ಡಾಕ್ಯೂಮೆಂಟರಿ ರಿಲೀಸ್ ಗೆ ಸಿದ್ಧತೆ ನಡೆಸಿರುವುದಾಗಿ ನಿರ್ದೇಶಕಿ ಲೀನಾ ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಡಾಕ್ಯೂಮೆಂಟರಿಯ ಫಸ್ಟ್ ಪೋಸ್ಟರ್ ಬಿಡಿಗಡೆಯಾಗುತ್ತಿದ್ದಂತೆ ಲೀನಾ ಮಣಿ ಮೇಕಳೈ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.
ಕಾಳಿ ಪೋಸ್ಟರ್ ನಲ್ಲಿ ಕಾಳಿ ಮಾತೆ ಸಿಗರೇಟ್ ಸೇದುತ್ತಿರುವಂತೆ ತೋರಿಸಲಾಗಿದೆ. ಈ ಮೂಲಕ ಹಿಂದೂ ದೇವತೆಗಳಿಗೆ ಅವಮಾನ ಮಾಡುತ್ತಿರುವುದೂ ಅಲ್ಲದೇ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟುಮಾಡಲಾಗುತ್ತಿದೆ ಎಂದು ಜನರು ಕಿಡಿಕಾರಿದ್ದಾರೆ.
ಅಲ್ಲದೇ ಜನಪ್ರಿಯತೆಗಾಗಿ ಈರೀತಿ ವಿವಾದಾತ್ಮಕ ಪೋಸ್ಟರ್ ಗಳನ್ನು, ಭಾವನಾತ್ಮಕ ವಿಚಾರಗಳನ್ನು ಬಳಸಿಕೊಳ್ಳುವುದು ಸರಿಯಲ್ಲ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ ಲೀನಾ ಮಣಿ ಮೇಕಳೈ ಅವರ ಕಾಳಿ ಡಾಕ್ಯೂಮೆಂಟರಿ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದೆ.