alex Certify BIG NEWS: ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅರೆಸ್ಟ್

ಮಂಗಳೂರು: ಮಹಾತ್ಮಾ ಗಾಂಧೀಜಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ದೇವಾಲಯಗಳ ತೆರವು ವಿಚಾರವಾಗಿ ಮಾತನಾಡಿದ್ದ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ, ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಬೆದರಿಕೆಯೊಡ್ಡಿದ್ದರು. ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ…ಇನ್ನು ನೀವು ಯಾವ ಲೆಕ್ಕ ಸ್ವಾಮಿ..ಯಾವ ತುಘಲಕ್ ಸರ್ಕಾರ ನಡೆಸುತ್ತಿದ್ದೀರಿ? ನಾಚಿಕೆ ಇಲ್ಲದ ಸರ್ಕಾರ ನೈತಿಕತೆ ಇಲ್ಲದ ಮಂತ್ರಿ ಮಂಡಲ ಎಂದು ವಾಗ್ದಾಳಿ ನಡೆಸಿ ಎಚ್ಚರಿಕೆ ನೀಡಿದ್ದರು.

ಧರ್ಮೇಂದ್ರ ಅವರ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ವಿವಾದದ ಬೆನ್ನಲ್ಲೇ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದರು. ಆದರೀಗ ಮಂಗಳೂರು ಪೊಲೀಸರು ಧರ್ಮೇಂದ್ರ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...