ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
BIG NEWS: ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ, ಕೋರ್ಟ್ ತೀರ್ಪು ಪಾಲಿಸಬೇಕು; ಆರಗ ಜ್ಞಾನೇಂದ್ರ
ಶಾಂತಿ, ಸುವ್ಯವಸ್ಥೆ ಕಾಪಾಡುವಂತೆ ಶಾಲಾ-ಕಾಲೇಜುಗಳಲ್ಲಿ ಮನವಿ ಮಾಡಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಹೈಕೋರ್ಟ್ ನೀಡುವ ತೀರ್ಪಿನ ವಿರುದ್ಧ ನಡೆದುಕೊಂಡರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ರಾಜಧಾನಿ ಬೆಂಗಳೂರಿನಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ. ಪ್ರೆಜರ್ ಟೌನ್, ಬಿಬಿಎಂಪಿ ಕಾಲೇಜುಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕಾಲೇಜು ಮುಂಭಾಗ ಹೊಯ್ಸಳ ವಾಹನ ನಿಯೋಜಿಸಲಾಗಿದೆ. ಸಣ್ಣಪುಟ್ಟ ಘಟನೆ, ಗಲಾಟೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಕೋರ್ಟ್ ನೀಡುವ ತೀರ್ಪನ್ನು ಎಲ್ಲರೂ ಪಾಲಿಸಬೇಕು ಎಂದು ತಿಳಿಸಿದರು.