alex Certify BIG NEWS: ಹಿಜಾಬ್ ಧರಿಸಿ ಕಾಲೇಜಿಗೆ ಬಂದ 6 ವಿದ್ಯಾರ್ಥಿನಿಯರು ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಜಾಬ್ ಧರಿಸಿ ಕಾಲೇಜಿಗೆ ಬಂದ 6 ವಿದ್ಯಾರ್ಥಿನಿಯರು ಸಸ್ಪೆಂಡ್

ಮಂಗಳೂರು: ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ಆರಂಭವಾಗಿದ್ದು, ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿರುವ ಘಟನೆ ಉಪ್ಪಿನಂಗಡಿ ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ.

ಹಿಜಾಬ್ ಧರಿಸಿ ಕಾಲೇಜಿಗೆ ಬರಲು ಅವಕಾಶವಿಲ್ಲ ಎಂದು ಹಲವು ಬಾರಿ ಸೂಚನೆ ನೀಡಿದ್ದರೂ ವಿದ್ಯಾರ್ಥಿನಿಯರು ಯಾವುದೇ ನಿಯಮ ಪಾಲಿಸದೇ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಲಾಗಿದೆ.

ಉಪನ್ಯಾಸಕರ ಸಭೆಯಲ್ಲಿ ಕೈಗೊಂಡ ಒಮ್ಮತದ ನಿರ್ಧಾರದ ಬಳಿಕ ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...