ಚಾಮರಾಜನಗರ: ನಾಳೆಯಿಂದ ಪಿಯು ಹಾಗೂ ಪದವಿ ಕಾಲೇಜುಗಳು ಆರಂಭವಾಗುತ್ತವೆ. ಯಾವುದೇ ಕಾರಣಕ್ಕೂ ಹಿಜಾಬ್ ಧರಿಸಿ ಬರಲು ಅವಕಾಶವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಚಾಮರಾಜನಗರದಲ್ಲಿ ಮಾತನಾಡಿದ ಅವರು, ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ಆದರೆ ಹಿಜಾಬ್ ಧರಿಸಿ ಕಾಲೇಜಿಗೆ ಬರಲು ಅವಕಾಶವಿಲ್ಲ. ಹೈಕೋರ್ಟ್ ಈಗಾಗಲೇ ಮಧ್ಯಂತರ ಆದೇಶ ನೀಡಿದೆ. ಕೋರ್ಟ್ ಆದೇಶವನ್ನು ಗೌರವಿಸುವುದನ್ನು ವಿದ್ಯಾರ್ಥಿಗಳು ಕಲಿತುಕೊಳ್ಳಬೇಕು ಎಂದರು.
ಬಡರಾಷ್ಟ್ರಗಳ ಆರೋಗ್ಯ ಸಂರಕ್ಷಣೆ ವಿಚಾರದಲ್ಲಿ ಸೀರಂ ಕಂಪನಿ ಪಾತ್ರದ ಬಗ್ಗೆ ವಿವರಿಸಿದ ಸೈರಸ್ ಪೂನವಾಲ
ಹೈಕೋರ್ಟ್ ಸೂಚಿಸಿದ ಬಳಿಕವೂ ಹಿಜಾಬ್ ಧರಿಸಿ ಬರುವುದು ಸರಿಯಲ್ಲ. ಕಾನೂನು ಉಲ್ಲಂಘಿಸುವವರನ್ನು ಕ್ಷಮಿಸಲು ಸಾಧ್ಯವಿಲ್ಲ. ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ. ಶಾಲಾ-ಕಾಲೇಜುಗಳಿಗೆ ಸಂಬಂಧಪಡದ ವ್ಯಕ್ತಿಗಳು ಬರದಂತೆ ಪ್ರಾಂಶುಪಾಲರು, ಆಡಳಿತ ಮಂಡಳಿಗಳು ನೋಡಿಕೊಳ್ಳುವುವುದು ಅವರ ಜವಾಬ್ದಾರಿ. ಯಾರೂ ಯಾರ ಬಗ್ಗೆಯೂ ಆರೋಪ ಮಾಡುವುದು, ಟೀಕೆ ಮಾಡುವುದು ಬೇಡ ಎಂದು ಹೇಳಿದರು.