ಮಂಗಳೂರು: ಕಾಲೇಜಿನಲ್ಲಿ ಹಿಜಾಬ್ ಧರಿಸಿ ತರಗತಿಗೆ ಬರಲು ಅವಕಾಶ ನೀಡದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶೇ.16ರಷ್ಟು ವಿದ್ಯಾರ್ಥಿನಿಯರು ಟಿಸಿಯನ್ನೇ ಹಿಂಪಡೆದ ಘಟನೆ ನಡೆದಿದೆ.
ಹಿಜಾಬ್ ಧರಿಸಿ ತರಗತಿಗೆ ಬರುವುದಾದರೆ ಟಿಸಿ ಪಡೆದುಕೊಂಡು ಹೋಗುವಂತೆ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಪಿ.ಎಸ್.ಯಡಪಡಿತ್ತಾಯ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ 145 ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನಿಂದ ಟಿಸಿ ಪಡೆದುಕೊಂಡಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸುಮಾರು 900 ವಿದ್ಯಾರ್ಥಿನಿಯರ ಪೈಕಿ ಸರ್ಕಾರಿ ಕಾಲೇಜಿನ ಶೇ.34ರಷ್ಟು ಹಾಗೂ ಅನುದಾನಿತ ಕಾಲೇಜಿನ ಶೇ.13ರಷ್ಟು ವಿದ್ಯಾರ್ಥಿನಿಯರು ಸೇರಿ ಒಟ್ಟು 145 ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿ ಹಿಂಪಡೆದಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ.