ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ಕಾಯ್ದಿರಿಸಿದೆ.
ಹಿಜಾಬ್ ಅರ್ಜಿ ವಿಚಾರಣೆ ಕುರಿತು ಕಳೆದ 11 ದಿನಗಳ ವಾದ-ಪ್ರತಿವಾದ ಆಲಿಸಿದ ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ನೇತೃತ್ವದ ಹೈಕೋರ್ಟ್ ತ್ರಿಸದಸ್ಯ ಪೀಠ, ಮಧ್ಯಂತರ ಅರ್ಜಿದಾರರು ಬಯಸಿದರೆ ಲಿಖಿತ ವಾದ ಸಲ್ಲಿಸಬಹುದು ಎಂದು ತಿಳಿಸಿದೆ.
ಅರ್ಜಿದಾರರ ಪರ ಹಾಗೂ ಸರ್ಕಾರದ ಪರ ವಕೀಲರ ವಾದ-ಪ್ರತಿವಾದ ಮುಕ್ತಾಯಗೊಂಡಿದ್ದು, ಹಿಜಾಬ್ ಕುರುತ ತೀರ್ಪನ್ನು ಹೈಕೋರ್ಟ್ ಪೀಠ ಕಾಯ್ದಿರಿಸಿದೆ.