alex Certify BIG NEWS: ಹಿಜಾಬ್ ವಿವಾದ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಜಾಬ್ ವಿವಾದ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಕುರಿತ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಮುಕ್ತಾಯಗೊಂಡಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ.

ಹಿಜಾಬ್ ಕುರಿತು ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ದ್ವಿಸದಸ್ಯಪೀಠ ವಾದ-ಪ್ರತಿವಾದಗಳನ್ನು ಆಲಿಸಿದ್ದು, ತೀರ್ಪು ಕಾಯ್ದಿರಿಸಿದೆ. ಕಳೆದ 10 ದಿನಗಳಿಂದ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿತ್ತು.

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಅಥವಾ ಯಾವುದೇ ಧಾರ್ಮಿಕ ಚಿಹ್ನೆಗಳಿಗೆ ಅವಕಾಶವಿಲ್ಲ, ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿತ್ತು. ಇದೀಗ ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...