ನವದೆಹಲಿ: ರಾಜ್ಯದಲ್ಲಿ ನಡೆದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 7ಕ್ಕೆ ವಿಚಾರಣೆ ಮುಂದೂಡಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹಾಗೂ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಿದೆ ಎಂದು ತಿಳಿದುಬಂದಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಕ್ಕೆ ಸರ್ಕಾರಿ ಕಾಲೇಜುಗಳ ಅಭಿವೃದ್ಧಿ ಸಮಿತಿಗಳಿಗೆ ಅಧಿಕಾರ ನೀಡಿದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ಎತ್ತಿ ಹಿಡಿದ ತೀರ್ಪನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದ್ದು, ಪ್ರಕರಣದ ವಿಚಾರಣೆ ಇಂದಿನಿಂದ ಆರಂಭವಾಗಿದೆ.