alex Certify BIG NEWS: ಹಿಜಾಬ್ ವಿವಾದ; ಹೈಕೋರ್ಟ್ ಪೂರ್ಣಪೀಠದಲ್ಲಿ ವಿಚಾರಣೆ ಆರಂಭ; ವಾದ-ಪ್ರತಿವಾದ ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಜಾಬ್ ವಿವಾದ; ಹೈಕೋರ್ಟ್ ಪೂರ್ಣಪೀಠದಲ್ಲಿ ವಿಚಾರಣೆ ಆರಂಭ; ವಾದ-ಪ್ರತಿವಾದ ಇಲ್ಲಿದೆ ಮಾಹಿತಿ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ಪೂರ್ಣಪೀಠದಲ್ಲಿ ಆರಂಭವಾಗಿದ್ದು, ರಾಜ್ಯದ ಜನತೆಯ ಚಿತ್ತ ನ್ಯಾಯಾಲಯದ ತೀರ್ಪಿನತ್ತ ನೆಟ್ಟಿದೆ.

ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ಎಸ್ ದೀಕ್ಷಿತ್ ಹಾಗೂ ನ್ಯಾ.ಖಾಜಿ ಜೈಬುನ್ನೀಸಾ ಮೊಹಿದ್ದೀನ್ ಅವರನ್ನೊಳಗೊಂಡ ಪೂರ್ಣಪೀಠದಲ್ಲಿ ವಾದ-ಪ್ರತಿವಾದ ಆರಂಭವಾಗಿದ್ದು, ಅರ್ಜಿ ವಿಚಾರಣೆ ನಡೆಯುತ್ತಿದೆ.

ಹಿಜಾಬ್ ಧರಿಸುವುದು ಮುಸ್ಲಿಂ ಮಹಿಳೆಯರ ಹಕ್ಕು. ಸಂವಿಧಾನದ ಪ್ರಶ್ನೆಗಳನ್ನು ಹೈಕೋರ್ಟ್ ನಿರ್ಧರಿಸಬೇಕು ಎಂದು ವಕೀಲ ಸಂಜಯ್ ಹೆಗ್ಡೆ ವಾದ ಮಂಡಿಸಿದ್ದಾರೆ. ಉಡುಪಿಯ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದಾಗ ಡಿಸೆಂಬರ್ 2021ರಲ್ಲಿ ಶಾಲೆಯ ಶಿಕ್ಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳ ಹಾಜರಾತಿಯನ್ನು ಆಬ್ಸೆಂಟ್ ಎಂದು ಹಾಕುತ್ತಿದ್ದರಲ್ಲದೇ ಹಿಜಾಬ್ ತೆಗೆಯುವಂತೆ ಗದರುತ್ತಿದ್ದರು. ಈ ಬಗ್ಗೆ ವಿದ್ಯಾರ್ಥಿನಿಯರು ಶಾಲಾ ಅಭಿವೃದ್ಧಿ ಮಂಡಳಿಗೆ ದೂರು ನೀಡಿದ್ದಾರೆ ಎಂದು ಅರ್ಜಿದಾರರ ಪರ ವಕೀಲ ಸಂಜಯ್ ಹೆಗ್ಡೆ ವಾದ ಮಂಡಿಸಿದ್ದಾರೆ.

ಹೃದಯ ಸಂಬಂಧಿ ಕಾಯಿಲೆಗಳಿಗೆ ರಾಮಬಾಣ “ಚಹಾ”

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆ ರಿತುರಾಜ್ ಅವಸ್ತಿ, ಕರ್ನಾಟಕ ಶಿಕ್ಷಣ ಕಾಯ್ದೆಯಲ್ಲಿ ಸಮವಸ್ತ್ರ ಸಂಬಂಧ ನಿಯಮ ಇಲ್ಲ. ಸಮವಸ್ತ್ರದ ಅಗತ್ಯವಿಲ್ಲವೇ..? ಎಂದು ಕೇಳಿದ್ದಾರೆ. ವಾದ ಮುಂದುವರೆಸಿದ ಸಂಜಯ್ ಹೆಗ್ಡೆ, 1995ರಲ್ಲಿ ಕರ್ನಾಟಕ ಸರ್ಕಾರ ಶಾಲೆಗಳಲ್ಲಿ ಮೊದಲು ಸಮವಸ್ತ್ರ ನಿಯಮ ರೂಪಿಸಿತು. ಶಾಲಾ ಪಠ್ಯಕ್ರಮ ಸಂಬಂಧ ಈ ನಿಯಮವಿದೆ. ಆದರೆ 5 ವರ್ಷಕ್ಕೊಮ್ಮೆ ಬದಲಿಸಬೇಕು. ಇಚ್ಛೆ ಬಂದ ಕಡೆ ಸಮವಸ್ತ್ರ ಹೊಲಿಸಲು ಅವಕಾಶ ನೀಡಲಾಗಿದೆ. ಕಾಯ್ದೆಯಲ್ಲಿ ಶಾಲೆಗಳಿಗೆ ಸಮವಸ್ತ್ರ ಸಂಬಂಧ ಕೆಲ ಸೂಚನೆಗಳಿವೆ. ಆದರೆ ಪಿಯು ಕಾಲೇಜುಗಳಿಗೆ ಸಮವಸ್ತ್ರ ಸಂಬಂಧ ಯಾವುದೇ ನಿಯಮಗಳಿಲ್ಲ. ಸರ್ಕಾರ, ಶಾಲೆ ಒಂದು ಗೊತ್ತುವಳಿ ಮೇಲೆ ಅವಲಂಭಿತವಾಗಿದ್ದು, ಸಮವಸ್ತ್ರಕ್ಕೆ ಸಂಬಂಧಿಸಿದಂತೆ ಗೊತ್ತುವಳಿ ಅಂಗೀಕರಿಸಲಾಗಿದೆ. ಹೃದಯ ವೈಶಾಲ್ಯತೆ ಇಲ್ಲದೇ ಈ ದೇಶದ ಬೆಳವಣಿಗೆ ಅಸಾಧ್ಯ ಎಂದರು.

‘ಪ್ರಧಾನಿ ಮೋದಿ ಏಕೆ ಇನ್ನೂ ಭೂತಕಾಲದಲ್ಲಿಯೇ ಇದ್ದಾರೆ’……? ಪ್ರಿಯಾಂಕ ಗಾಂಧಿ ವಾದ್ರಾ ಪ್ರಶ್ನೆ

ಈ ವೇಳೆ ವಾದ ಮಂಡಿಸಿದ ವಕೀಲ ದೇವದತ್ ಕಾಮತ್, ಹಿಜಾಬ್ ಧರಿಸಲು ಅವಕಾಶ ಕೊಡಬೇಕು. ಹಿಜಾಬ್ ನಿಂದ ಬೇರೆಯವರಿಗೆ ಸಮಸ್ಯೆಯಿಲ್ಲ, ಇದು ಅವರವರ ಸಂಪ್ರದಾಯ. ರಾಜ್ಯ ಸರ್ಕಾರ ಬೆಂಕಿಯೊಂದಿಗೆ ಆಟವಾಡುತ್ತಿದ್ದು, ಸರ್ಕಾರದ ಆದೇಶ ಹಿಜಾಬ್ ಹಕ್ಕಲ್ಲ ಎಂದು ಹೇಳಿದ್ದಾರೆ.

ಈ ವೇಳೆ ವಾದ ಮಂಡಿಸಿದ ಸರ್ಕಾರದ ಪರ ವಕೀಲ ಎಜಿ ಪ್ರಭುಲಿಂಗ ನಾವದಗಿ, ಹಿಜಾಬ್ ಗೆ ಪ್ರತಿಯಾಗಿ ಕೇಸರಿ ಶಾಲು ಹಾಕಿಕೊಂಡು ವಿದ್ಯಾರ್ಥಿಗಳು ಕಾಲೇಜಿಗೆ ಬರುತ್ತಿದ್ದಾರೆ. ಇದರಿಂದ ರಾಜ್ಯಾದ್ಯಂತ ಗಲಭೆ ವಾತಾವರಣ ನಿರ್ಮಾಣವಾಗಿದೆ. ನಾಳೆವರೆಗೂ ಹೈಸ್ಕೂಲ್, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕಾಲೇಜು ಆರಂಭಿಸಲು ಸರ್ಕಾರ ಸಿದ್ಧವಿದೆ. ಆದರೆ ಒಬ್ಬರು ಹಿಜಾಬ್, ಇನ್ನೊಬ್ಬರು ಕೇಸರಿ ಶಾಲು ಧರಿಸಲು ಒತ್ತಾಯ ಕೇಳಿಬರುತ್ತಿದೆ. ಇಂತಹ ಸಮಯದಲ್ಲಿ ಕಾಲೇಜು ಆರಂಭಿಸುವುದು ಕಷ್ಟ. ಶಾಲಾ ಅಭಿವೃದ್ಧಿ ಸಮಿತಿ ವಸ್ತ್ರಸಂಹಿತೆಗೆ ಬದ್ಧವಾಗಿರಬೇಕು. ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ವಾದ ಮಂಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...