ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಭುಗಿಲೆದ್ದಿದ್ದು, ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯದ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಿದ್ದಾರೆ.
ಹಿಜಾಬ್ ಕುರಿತ ಅರ್ಜಿ ವಿಚಾರಣೆ ಹೈಕೋರ್ಟ್ ಪೂರ್ಣಪೀಠಕ್ಕೆ ವರ್ಗಾವಣೆಗೊಂಡಿದ್ದು, ಇಂದು ಅಥವಾ ನಾಳೆ ತೀರ್ಪು ಬರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ ಹಿಜಾಬ್ ವಿವಾದದ ಬಗ್ಗೆ ಮಾಹಿತಿ ನೀಡಿದ್ದಾರೆ.
ನಾಳೆ ಬಿಡುಗಡೆಯಾಗಲಿದೆ ‘ಜೇಮ್ಸ್’ ಟೀಸರ್
ಜಿಲ್ಲೆಗಳಲ್ಲಿ ನಡೆಯುತ್ತಿರುವ ಘಟನೆಗಳು, ಕಾನೂನು ಸುವ್ಯವಸ್ಥೆ, ಕೋರ್ಟ್ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರಿಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.