ನವದೆಹಲಿ: ರಾಜ್ಯದ ಶಾಲಾ-ಕಾಲೇಜುಗಳಲ್ಲಿನ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಯೂಥ್ ಕಾಂಗ್ರೆಸ್ ಸರ್ವೋಚ್ಛ ನ್ಯಾಯಾಲಯಕ್ಕೆ ಮತ್ತೊಂದು ಅರ್ಜಿ ಸಲ್ಲಿಸಿದೆ.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಯೂಥ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಹಿಜಾಬ್ ಮೂಲಭೂತ ಹಕ್ಕಾಗಿದ್ದು, ಧಾರ್ಮಿಕ ನಂಬಿಕೆಗೆ ಧಕ್ಕೆಯಾಗದಂತೆ ಹಿಜಾಬ್ ಗೆ ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಮಧ್ಯಂತರ ಆದೇಶ ನೀಡಿರುವ ಹೈಕೋರ್ಟ್ ಮುಂದಿನ ಆದೇಶದವರೆಗೆ ಯಾವುದೇ ಧಾರ್ಮಿಕ ಗುರುತು ಧರಿಸಿ ಶಾಲಾ-ಕಾಲೇಜಿಗೆ ಬರುವಂತಿಲ್ಲ. ಸಮವಸ್ತ್ರ ಕಡ್ಡಾಯ ಎಂದು ಆದೇಶ ನೀಡಿದೆ. ಇದರ ಬೆನ್ನಲ್ಲೇ ಇದೀಗ ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.