ದಾವಣಗೆರೆ: ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಫೆಬ್ರವರಿ 14ರ ಬೆಳಿಗ್ಗೆ 6ಗಂಟೆಯಿಂದ ಫೆ.15ರ ಬೆಳಿಗ್ಗೆ 6 ಗಂಟೆವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ.
ಅಲ್ಲದೇ ಶಾಲಾ-ಕಾಲೇಜಿನಲ್ಲಿ ಹಿಜಾಬ್ ವಿವಾದ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧ ಮಾಡಲಾಗಿದೆ ಎಂದು ತಿಳಿಸಿದ್ದಾರೆ.