alex Certify BIG NEWS: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ; ಕ್ಷಣಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿರುವ ಫಲಿತಾಂಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ; ಕ್ಷಣಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿರುವ ಫಲಿತಾಂಶ

ಶಿಮ್ಲಾ: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಮತ ಎಣಿಕೆ ಚುರುಕುಗೊಂಡಿದ್ದು, ಕ್ಷಣಕ್ಷಣಕ್ಕೂ ಫಲಿತಾಂಶ ರೋಚಕ ತಿರುವು ಪಡೆದುಕೊಳ್ಳುತ್ತಿದೆ.

ಗುಜರಾತ್ ನಲ್ಲಿ ಭಾರಿ ಮುನ್ನಡೆ ಸಾಧಿಸಿದ್ದ ಬಿಜೆಪಿ ಹಿಮಾಚಲ ಪ್ರದೇಶದಲ್ಲಿಯೂ ಮುನ್ನಡೆಯತ್ತ ಸಾಗಿತ್ತು. ಆದರೆ ಇತ್ತೀಚಿನ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮತಗಳಲ್ಲಿ ಕುಸಿತ ಕಂಡಿದೆ.

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ 38 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಪಕ್ಷೇತರ ಅಭ್ಯರ್ಥಿಗಳು 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ ಆಪ್ ಸಾಧನೆ ಶೂನ್ಯವಾಗಿದೆ.

ಇನ್ನು ಗುಜರಾತ್ ನಲ್ಲಿ ಬಿಜೆಪಿ 154 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಹೊಸ ದಾಖಲೆ ಬರೆದಿದ್ದು, ಕಾಂಗ್ರೆಸ್ 18 ಹಾಗೂ ಆಪ್ 6, ಇತರೆ 4 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...