alex Certify BIG NEWS: ಹಿಮಾಚಲ ಪ್ರದೇಶದಲ್ಲಿ ಮುಂದುವರೆದ ಕಾಂಗ್ರೆಸ್-ಬಿಜೆಪಿ ಹಾವು ಏಣಿ ಆಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಮಾಚಲ ಪ್ರದೇಶದಲ್ಲಿ ಮುಂದುವರೆದ ಕಾಂಗ್ರೆಸ್-ಬಿಜೆಪಿ ಹಾವು ಏಣಿ ಆಟ

ಅಹಮದಾಬಾದ್: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶ ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಗುಜರಾತ್ ನಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿನತ್ತ ದಾಪುಗಾಲಿಟ್ಟಿದೆ. ಆದರೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್-ಬಿಜೆಪಿ ಹಾವು ಏಣಿ ಆಟ ಮುಂದುವರೆದಿದೆ.

ಗುಜರಾತ್ ನಲ್ಲಿ 153 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 20 ಹಾಗೂ ಆಪ್ 6, ಇತರೆ 4 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ 40 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸರ್ಕಾರ ರಚನೆಯತ್ತ ದಾಪುಗಾಲಿಟ್ಟಿದೆ. ಬಿಜೆಪಿ 26 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಪಕ್ಷೇತರ ಅಭ್ಯರ್ಥಿಗಳು 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಹಿಮಾಚಲ ಪ್ರದೇಶದಲ್ಲಿ ಮತ ಎಣಿಕೆಯಲ್ಲಿ ಬಿಜೆಪಿ ಹಿನ್ನಡೆ ಕಾಯ್ದುಕೊಂಡಿದ್ದರೂ ಅಧಿಕಾರದ ಗದ್ದುಗೆ ಏರಲು ಇನ್ನಿಲ್ಲದ ಕಸರತ್ತು ನಡೆಸಿದ್ದು, ಕಾಂಗ್ರೆಸ್ ರೆಬಲ್ ನಾಯಕರು ಹಾಗೂ ಪಕ್ಷೇತರರ ಬೆಂಬಲದೊಂದಿಗೆ ಮತ್ತೆ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಮಾತುಕತೆ ನಡೆಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...