ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಮತ ಎಣಿಕೆ ಚುರುಕುಗೊಂಡಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ. ಸಿಎಂ ಜೈರಾಮ್ ಠಾಕೂರ್ ಜಯಭೇರಿ ಬಾರಿಸಿದ್ದಾರೆ.
ಸೆರಾಜ್ ವಿಧಾನಸಭಾ ಕ್ಷೇತ್ರ ದಿಂದ ಸ್ಪರ್ಧಿಸಿದ್ದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. 20,425 ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.
ಸಧ್ಯದ ಟ್ರೆಂಡ್ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 35 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ 30 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತರೆ ಅಭ್ಯರ್ಥಿಗಳು 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.