alex Certify BIG NEWS: ಹಿಮಾಲಯಕ್ಕೆ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ ವೈದ್ಯ ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಮಾಲಯಕ್ಕೆ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ ವೈದ್ಯ ನಾಪತ್ತೆ

ಬೆಂಗಳೂರು: ಹಿಮಾಲಯಕ್ಕೆ ಚಾರಣಕ್ಕೆಂದು ತೆರಳಿದ್ದ ರಾಜ್ಯದ ವೈದ್ಯರೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ಪ್ರತಿಷ್ಠಿತ ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ.ಚಂದ್ರಮೋಹನ್ ನಾಪತ್ತೆಯಾಗಿದ್ದು, ಹಿಮಾಲಯಕ್ಕೆ ಟ್ರೆಕಿಂಗ್ ಗೆ ಹೋಗಿದ್ದರು. ಜೂನ್ 20ರ ಬಳಿಕ ಚಂದ್ರಮೋಹನ್ ಫೋನ್ ಸ್ವಿಚ್ಡ್ ಆಫ್ ಆಗಿದ್ದು, ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ.

ಚಂದ್ರಮೋಹನ್ ಬೆಂಗಳೂರಿನ ವಸಂತ ನಗರದ ನಿವಾಸಿಯಾಗಿದ್ದಾರೆ. ಒಂದು ವಾರದಿಂದ ವೈದ್ಯ ಚಂದ್ರಮೋಹನ್ ಸುಳಿವು ಸಿಗದಿರುವುದು ಕುಟುಂಬದವರಲ್ಲಿ ಆತಂಕ ಮನೆ ಮಾಡಿದೆ. ವೈದ್ಯ ನಾಪತ್ತೆಯಾಗಿರುವ ಬಗ್ಗೆ ಕುಟುಂಬದವರು ಇದೀಗ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...