alex Certify BIG NEWS: ಹಿರಿಯ ನಟ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿರಿಯ ನಟ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಿನದಿಂದ ದಿನಕ್ಕೆ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ.

ಪ್ರಿಯಾಂಕಾ ಗಾಂಧಿ ಬಂಧನ ಖಂಡನೀಯ; ಇದು ದೇಶದ ಪ್ರತಿ ಹೆಣ್ಣು ಮಕ್ಕಳಿಗೆ ಮಾಡಿದ ಅಪಮಾನ; ಕೇಂದ್ರದ ವಿರುದ್ಧ ಡಿ.ಕೆ.ಶಿ. ಆಕ್ರೋಶ

ಸತ್ಯಜಿತ್ ಅವರಿಗೆ ಗ್ಯಾಂಗ್ರಿನ್ ನಿಂದಾಗಿ ಈಗಾಗಲೇ ಒಂದು ಕಾಲು ತೆಗೆಯಲಾಗಿತ್ತು. ಮಧುಮೇಹ ಹಾಗೂ ಇನ್ನಿತರ ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಹಿರಿಯ ನಟ ಹಲವು ದಿನಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಕನ್ನಡದ ’ಅಪ್ಪು’, ಅರಸು, ಆಪ್ತಮಿತ್ರ, ಅಭಿ ಸೇರಿದಂತೆ ನೂರಾರು ಚಿತ್ರಗಳಲ್ಲಿ ಪೋಷಕ ಪಾತ್ರದಲ್ಲಿ ಅಭಿನಯಿಸಿರುವ ಸತ್ಯಜಿತ್ 2018ರಲ್ಲಿ ತೆರೆ ಕಂಡ ’ಸೆಕೆಂಡ್ ಹಾಫ್’ ಚಿತ್ರದ ಬಳಿಕ ಅಭಿನಯದಿಂದ ದೂರ ಸರಿದಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...