ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಹಲವು ಹಿರಿಯ ನಾಯಕರಿಗೆ ಶಾಕ್ ನೀಡಲಾಗಿದ್ದು, ಸಂಪುಟದಿಂದ ಕೈಬಿಡಲಾಗಿದೆ.
ಪ್ರಮುಖವಾಗಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿದ್ದ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಆರ್.ಶಂಕರ್, ಸಿ.ಪಿ.ಯೋಗೇಶ್ವರ್, ಶ್ರೀಮಂತ ಪಾಟೀಲ್ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ.
ಕುಡಿತದ ನಶೆಯಲ್ಲಿದ್ದ ಚಾಲಕನ ಪ್ರಾಣ ಕಾಪಾಡಿದ ಟೆಸ್ಲಾ ಆಟೋಪೈಲಟ್
ಈ ಮೂಲಕ ಹಿರಿಯ, ಅನುಭವಿ ನಾಯಕರಿಗೆ ಸಂಪುಟದಿಂದ ಕೊಕ್ ಕೊಟ್ಟು ಪಕ್ಷ ಸಂಘಟನೆ ನಿಟ್ಟಿನಲ್ಲಿ ಅವರನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.
ಇನ್ನೊಂದೆಡೆ ಬೊಮ್ಮಾಯಿ ಸಂಪುಟದಲ್ಲಿ ಹಲವರಿಗೆ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.